ಬಿಜೆಪಿ ಧ್ವಜ
ನವದೆಹಲಿ: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿರುವ ಪಕ್ಷದ ಭಿನ್ನಮತೀಯ ನಾಯಕರು ರಾಷ್ಟ್ರ ರಾಜಧಾನಿಗೆ ಸೋಮವಾರ ಬಂದಿದ್ದಾರೆ.
ಕರ್ನಾಟಕದಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಸಿದ್ಧಪಡಿಸಿರುವ ವರದಿಯನ್ನು ವರಿಷ್ಠರಿಗೆ ಮಂಗಳವಾರ ಸಲ್ಲಿಸಲಾಗುವುದು. ಇದೇ ವೇಳೆ, ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ಮತ್ತೊಮ್ಮೆ ಒತ್ತಡ ಹೇರುವ ಪ್ರಯತ್ನ ನಡೆಸಲಾಗುವುದು ಎಂದು ಭಿನ್ನರ ಬಣದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.