
ಬೆಂಗಳೂರು: ‘ಬಿಜೆಪಿಯಲ್ಲಿ ಏಕ ವ್ಯಕ್ತಿ ವ್ಯವಸ್ಥೆ ಇಲ್ಲ, ಪಕ್ಷದ ಪ್ರಮುಖರ ಸಭೆಯಲ್ಲೇ ಎಲ್ಲವನ್ನೂ ತೀರ್ಮಾನ ಮಾಡಲಾಗುತ್ತದೆ. ಸಣ್ಣಪುಟ್ಟ ಸಮಸ್ಯೆ, ವೈಮನಸ್ಸುಗಳನ್ನು ಸರಿಮಾಡಿಕೊಂಡು ಪಕ್ಷವನ್ನು ಬಲಪಡಿಸುತ್ತೇವೆ’ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪ್ರತಿ ಜಿಲ್ಲೆಯ ಪ್ರಮುಖ ಕಾರ್ಯಕರ್ತರ ಜತೆ ಎರಡು ಗಂಟೆ ಸಭೆ ನಡೆಸಲಾಗುತ್ತಿದೆ. ವಿಧಾನಸಭೆಯ ಎರಡು ಕ್ಷೇತ್ರಗಳ ಉಪಚುನಾವಣೆ, ವಿಧಾನಪರಿಷತ್, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರೇಟರ್ ಬೆಂಗಳೂರು ಪ‍್ರಾಧಿಕಾರದ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲಾಗುತ್ತಿದೆ. ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡುತ್ತೇವೆ’ ಎಂದರು.
‘ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಜನರಿಗೆ ಸಮಾಧಾನ ತಂದಿಲ್ಲ. ರಾಜ್ಯದ ಅಭಿವೃದ್ಧಿಗೆ ಹಣ ಇಲ್ಲದಿದ್ದರೂ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಹಣ ನೀಡಿದ್ದಾರೆ. ರಾಜ್ಯ ಸರ್ಕಾರದ ನಿರ್ಧಾರಗಳು, ಆಡಳಿತ ವೈಫಲ್ಯದ ವಿರುದ್ಧದ ಹೋರಾಟಕ್ಕೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲಾಗುವುದು. ಉದ್ಯೋಗ ಖಾತ್ರಿ ಅಪಪ್ರಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.