ADVERTISEMENT

ಬೆಂಗಳೂರು: ಜ.5ಕ್ಕೆ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 15:58 IST
Last Updated 29 ಡಿಸೆಂಬರ್ 2025, 15:58 IST
   

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆ ಜನವರಿ 5 ರಂದು ನಡೆಯಲಿದೆ.

ಆ ಬಳಿಕ ಜನವರಿ 13ರವರೆಗೆ ಪಕ್ಷದ ವಿವಿಧ ಜಿಲ್ಲಾ ಘಟಕಗಳ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌.ಎಸ್‌ ನಂದೀಶ್‌ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪ್ರಮುಖರ ಸಮಿತಿ ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ವಿಷಯಗಳು, ಮುಂಬರುವ ಚುನಾವಣೆಗಳು ಮತ್ತು ಇತರ ಚಟುವಟಿಕೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.