ADVERTISEMENT

Video: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಸೆಪ್ಟೆಂಬರ್ 2022, 15:46 IST
Last Updated 20 ಸೆಪ್ಟೆಂಬರ್ 2022, 15:46 IST
ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ
ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ದೇವೇಗೌಡರನ್ನು ಭೇಟಿಯಾದ ಯಡಿಯೂರಪ್ಪ    

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಶಾಸಕ ಬಿ.ಎಸ್‌. ಯಡಿಯೂರಪ್ಪ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ವಿಧಾನಸಭೆ ಕಲಾಪ ಮುಗಿದ ಬಳಿಕ ಪದ್ಮನಾಭ ನಗರದ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಯಡಿಯೂರಪ್ಪ ಅವರ ಜೊತೆ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಸೇರಿದಂತೆ ಕೆಲ ಮುಖಂಡರು ಇದ್ದರು.

ADVERTISEMENT

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.