ADVERTISEMENT

ಪ್ರಿಯಾಂಕ್‌ ಖರ್ಗೆ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2024, 11:20 IST
Last Updated 28 ಡಿಸೆಂಬರ್ 2024, 11:20 IST
<div class="paragraphs"><p>ಪ್ರಿಯಾಂಕ್‌ ಖರ್ಗೆ, ಛಲವಾದಿ ನಾರಾಯಣಸ್ವಾಮಿ</p></div>

ಪ್ರಿಯಾಂಕ್‌ ಖರ್ಗೆ, ಛಲವಾದಿ ನಾರಾಯಣಸ್ವಾಮಿ

   

ಬೆಂಗಳೂರು: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಂಪುಟದಿಂದ ಕೈಬಿಡಬೇಕು. ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮೃತ ಗುತ್ತಿಗೆದಾರ ಸಚಿನ್‌ ಅವರು ಏಳು ಪುಟಗಳ ಮರಣಪತ್ರ ಬರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅವರನ್ನು ಸುಪಾರಿ ಕೊಟ್ಟು ಕೊಲ್ಲಿಸುವ ವಿಚಾರವೂ ಪ್ರಸ್ತಾವವಾಗಿದೆ. ಅವರಲ್ಲಿ ಪ್ರಿಯಾಂಕ್‌ ಖರ್ಗೆ ಆಪ್ತರ ಹೆಸರುಗಳೂ ಇವೆ. ತನಿಖೆ ಸರಿಯಾಗಿ ನಡೆಯಲು ಅವರ ರಾಜೀನಾಮೆ ಅಗತ್ಯ ಎಂದರು.

ADVERTISEMENT

ಪ್ರಿಯಾಂಕ್‌ ಖರ್ಗೆ ತಮಗೆ ಬೇಕಾದವರನ್ನು ಮುಂದಿಟ್ಟುಕೊಂಡು ವ್ಯವಹಾರ ಮಾಡುತ್ತಿದ್ದಾರೆ. ರಿಪಬ್ಲಿಕ್‌ ಆಫ್‌ ಕಲಬುರಗಿ ಆಗಿದೆ. ಕರ್ನಾಟಕದ ವ್ಯವಸ್ಥೆಯೇ ಬೇರೆ, ಅಲ್ಲಿನ ವ್ಯವಸ್ಥೆಯೇ ಬೇರೆ ಇದೆ. ಪೊಲೀಸರೂ ಖರ್ಗೆ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ದಲಿತ ಸಮುದಾಯಗಳು ಅವರ ವಿರುದ್ಧ ಮಾತನಾಡಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ದೂರಿದರು.

ಹೋರಾಟಕ್ಕೆ ಬಿಜೆಪಿ ಸಿದ್ಧತೆ
ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕಲಬುರಗಿ ಗುತ್ತಿಗೆದಾರ ಸಚಿನ್‌ ಕುಟುಂಬದ ಜತೆ ಬಿಜೆಪಿ ನಿಲ್ಲಲಿದೆ. ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಕುರಿತು ಬಿಜೆಪಿ ಹೊರಾಟ ರೂಪಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.