ADVERTISEMENT

ಮುಸ್ಲಿಂ ಪಕ್ಷವೆಂದು ಕಾಂಗ್ರೆಸ್‌ ಘೋಷಿಸಿಕೊಳ್ಳಲಿ: ಜಗದೀಶ ಶೆಟ್ಟರ್‌ ಸವಾಲು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2022, 15:31 IST
Last Updated 26 ಫೆಬ್ರುವರಿ 2022, 15:31 IST
ಜಗದೀಶ ಶೆಟ್ಟರ್‌ – ಸಂಗ್ರಹ ಚಿತ್ರ
ಜಗದೀಶ ಶೆಟ್ಟರ್‌ – ಸಂಗ್ರಹ ಚಿತ್ರ   

ಹುಬ್ಬಳ್ಳಿ: ಮತ ಬ್ಯಾಂಕ್‌ಗಾಗಿ ಮುಸ್ಲಿಮರನ್ನು ಓಲೈಸುತ್ತಿರುವ ಕಾಂಗ್ರೆಸ್‌ ಮುಸ್ಲಿಮರ ಪಕ್ಷವೆಂದು ಬಹಿರಂಗವಾಗಿ ಘೋಷಣೆ ಮಾಡಲಿ ಎಂದು ಶಾಸಕ ಜಗದೀಶ ಶೆಟ್ಟರ್‌ ಸವಾಲು ಹಾಕಿದರು.

ಕಾಂಗ್ರೆಸ್‌ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಶನಿವಾರ ನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು ‘ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾದರೂ ಯಾವೊಬ್ಬ ಕಾಂಗ್ರೆಸ್‌ ನಾಯಕರೂ ಮಾನವೀಯ ದೃಷ್ಟಿಯಿಂದಲೂ ಅವರ ಮನೆಗೆ ತೆರಳಿ ಸಾಂತ್ವನ ಹೇಳಲಿಲ್ಲ. ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ. ಕಾಂಗ್ರೆಸ್‌ ಮುಸ್ಲಿಮರ ಪಕ್ಷವೆಂದು ಘೋಷಿಸಿಕೊಂಡರೆ ಎಲ್ಲಾ ಹಿಂದುಗಳಾದರೂ ಒಂದಾಗುತ್ತಾರೆ’ ಎಂದರು.

’ಪ್ರತಿಭಟನೆ ನೆಪದಲ್ಲಿ ವಿಧಾನಸಭೆ ಅಧಿವೇಶನವನ್ನು ಕಾಂಗ್ರೆಸ್‌ ಹಾಳು ಮಾಡಿ ಈಗ ಮತ್ತೆ ಮೇಕೆದಾಟು ಪಾದಯಾತ್ರೆ ಮಾಡಲು ಹೊರಟಿದೆ. ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚೆ ಮಾಡಬಹುದಿತ್ತು. ಹಿಜಾಬ್‌ ಬಗ್ಗೆ ಕಾಂಗ್ರೆಸ್‌ ತನ್ನ ನಿಲುವು ಸ್ಪಷ್ಟಪಡಿಸಬೇಕಿತ್ತು’ ಎಂದರು.

ತಾಕತ್ತು ಇದ್ದರೆ ಕಾಂಗ್ರೆಸ್‌ಗೆ ಬಜೆಟ್‌ ಅಧಿವೇಶನದಲ್ಲಿಯಾದರೂ ಸಕ್ರಿಯವಾಗಿ ಪಾಲ್ಗೊಳ್ಳಲಿ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.