ADVERTISEMENT

ಅಪ್ಪ–ಮಕ್ಕಳ ಪಕ್ಷದಲ್ಲಿ ಅಣ್ಣ–ತಮ್ಮನ ಕಿತ್ತಾಟ: ನಳಿನ್‌ ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 20 ಜನವರಿ 2023, 23:11 IST
Last Updated 20 ಜನವರಿ 2023, 23:11 IST
   

ಬೆಂಗಳೂರು: ‘ಅಪ್ಪ ಮಕ್ಕಳ ಪಕ್ಷದಲ್ಲಿ ಅಣ್ಣ ದೊಡ್ಡವನೋ ತಮ್ಮ ದೊಡ್ಡವನೋ ಎಂಬ ಕಿತ್ತಾಟ ಶುರುವಾಗಿದೆ. ಇನ್ನೊಂದು ರಾಷ್ಟ್ರೀಯ ಪಕ್ಷದಲ್ಲಿ ಮುಖ್ಯಮಂತ್ರಿ ಯಾರೆಂಬ ಕಿತ್ತಾಟ ಆರಂಭವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿದ್ದಾರೆ.

ರೈತ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ‘ಈ ಚುನಾವಣೆಯಲ್ಲಿ ಬೇರೆ ಬೇರೆ ಪಕ್ಷದವರು ಶರ್ಟ್ ಹೊಲಿಸಿ ಕಾಯುತ್ತಿದ್ದಾರೆ. ಕೆಲವರು ಕೋಟ್ ಹೊಲಿಸಲು ಅಂಗಡಿಗೆ ಕೊಟ್ಟಿದ್ದಾರೆ. ಇನ್ನೂ ಕೆಲವರು ಹೊಸ ಪ್ಯಾಂಟ್, ಶರ್ಟ್ ಖರೀದಿಸಿದ್ದಾರೆ. ಇನ್ನೂ ಕೆಲವರು ಅವರೊಳಗೇ ಪ್ಯಾಂಟ್, ಶರ್ಟ್ ಹರಿಯಲು ಶುರು ಮಾಡಿದ್ದಾರೆ’ ಎಂದು ವ್ಯಂಗ್ಯವಾಡಿದ್ದಾರೆ.

‘ಮೂರು ಪಕ್ಷಗಳಲ್ಲಿ ಮೂರು ವಿಭಿನ್ನತೆ ಇದೆ. ರಾಷ್ಟ್ರೀಯ ಪಕ್ಷವೊಂದಿದೆ. ಅವರ ಸಭೆ ಆದಾಗ ಚಪ್ಪಲಿಗಳು ಕೈಯಲ್ಲಿ ಇರುತ್ತದೆ. ಇನ್ನೊಂದು ಕುಟುಂಬದ ಪಕ್ಷವಿದೆ; ಅದು ಅಪ್ಪ– ಮಕ್ಕಳ ಪಕ್ಷ. ಅವರ ಪಕ್ಷದ ಸಭೆ ಆದಾಗ ಒಬ್ಬನ ಚಪ್ಪಲಿ ಇನ್ನೊಬ್ಬನ ದೇಹದೊಳಗೆ ಇರುತ್ತದೆ. ಬಿಜೆಪಿಯಲ್ಲಿ ಮಾತ್ರ ಚಪ್ಪಲಿ ನಮ್ಮಲ್ಲೇ ಇರುತ್ತದೆ, ಶಾಂತವಾಗಿ ಸಭೆ ನಡೆಯುತ್ತದೆ’ ಎಂದು ಕಟೀಲ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.