ADVERTISEMENT

ತಮ್ಮದು ರೌಡಿ, ಗೂಂಡಾಗಳ ಪಕ್ಷವೆಂದು ಬಿಜೆಪಿಯವರೇ ಒಪ್ಪಿದ್ದಾರೆ: ಸುರ್ಜೆವಾಲಾ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 11:37 IST
Last Updated 17 ಜನವರಿ 2023, 11:37 IST
ರಣದೀಪ್‌ ಸಿಂಗ್‌ ಸುರ್ಜೆವಾಲಾ
ರಣದೀಪ್‌ ಸಿಂಗ್‌ ಸುರ್ಜೆವಾಲಾ    

ಹೊಸಪೇಟೆ (ವಿಜಯನಗರ): ‘ತಮ್ಮದು ರೌಡಿ ಮತ್ತು ಗೂಂಡಾಗಳ ಪಕ್ಷವೆಂದು ಸ್ವತಃ ಬಿಜೆಪಿಯವರೇ ಒಪ್ಪಿಕೊಂಡಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ತಿಳಿಸಿದರು.

ನಗರದ ಡಾ. ಪುನೀತ್‌ ರಾಜಕುಮಾರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ಪ್ರಜಾ ಧ್ವನಿ’ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಶಾಸಕ ಸಿ.ಪಿ. ಯೋಗೇಶ್ವರ ಅವರು ದೇಶದ ಗೃಹಮಂತ್ರಿ ಅಮಿತ್‌ ಶಾ ಅವರನ್ನು ಗೂಂಡಾ ಎಂದು ಹೇಳಿದ್ದಾರೆ. ರೌಡಿ, ಗೂಂಡಾಗಳ ಪಾರ್ಟಿ ಎಂದು ಅವರೇ ಒಪ್ಪಿಕೊಂಡಿದ್ದರೆ. ಅವರು ಒಂದು ಕ್ಷಣವೂ ಅಧಿಕಾರದಲ್ಲಿ ಇರಬಾರದು ಎಂದು ಆಗ್ರಹಿಸಿದರು.

ಭಾರತದ ಅತ್ಯಂತ ಭ್ರಷ್ಟ ಸರ್ಕಾರ ಯಾವುದಾದರೂ ಇದ್ದರೆ ಅದು ರಾಜ್ಯದ ಬಿಜೆಪಿ ಸರ್ಕಾರ. ಸರ್ಕಾರಿ ಖಜಾನೆ ಲೂಟಿ ಮಾಡಿ ತಮ್ಮ ಜೇಬು ತುಂಬಿಸಿಕೊಳ್ಳುವ ಸರ್ಕಾರವಿದು. ಇವರು ಯಾರಿಗೂ ಬಿಟ್ಟಿಲ್ಲ. ಸ್ವತಃ ಬಿಜೆಪಿಯವರಿಗೂ ಬಿಟ್ಟಿಲ್ಲ. ಇವರಿಗೆ ನಿತ್ಯ ಹಣ ಬೇಕು. ಬಿಜೆಪಿ ದೊಡ್ಡ ಸರ್ಪವಾಗಿದೆ. ಸ್ವತಃ ಅವರ ಕಾರ್ಯಕರ್ತರನ್ನು ಬಿಡುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ₹90 ಲಕ್ಷ ಪಡೆದಿದ್ದಾರೆ ಎಂದು ಗುತ್ತಿಗೆದಾರರ ಸಂಘದವರು ಆರೋಪಿಸಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನಿತ್ಯ ಅವರ ಪಕ್ಷದ ಮುಖಂಡರ ವಿರುದ್ಧವೇ ಮಾತನಾಡುತ್ತಾರೆ. ಕೈಗಾರಿಕೆ ಸಚಿವರನ್ನು ಬಿಜೆಪಿ ಶಾಸಕರೊಬ್ಬರು ದಲ್ಲಾಳಿ ಎಂದು ಕರೆದಿದ್ದಾರೆ. ಇವರು ಅಧಿಕಾರದಲ್ಲಿ ಮುಂದುವರೆಯಬೇಕಾ? ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.