ಬಿಜೆಪಿ ನಾಯಕರಿಂದ ಬೆಳೆಹಾನಿ ವೀಕ್ಷಣೆ
ನೇಸರಗಿ(ಬೆಳಗಾವಿ): ಬೈಲಹೊಂಗಲ ತಾಲ್ಲೂಕಿನ ನೇಸರಗಿಯಲ್ಲಿ ಮಳೆಯಿಂದ ಹಾನಿಗೆ ಒಳಗಾದ ಕ್ಯಾರೇಟ್, ಸೋಯಾಅವರೆ ಬೆಳೆಗಳನ್ನು ಬಿಜೆಪಿ ನಾಯಕರು ವೀಕ್ಷಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈತರಿಂದ ಮಾಹಿತಿ ಪಡೆದರು.
'ಬೆಳೆಹಾನಿಯಿಂದ ಸಮಸ್ಯೆ ಎದುರಿಸುತ್ತಿರುವ ನಮ್ಮ ಸಮಸ್ಯೆ ಆಲಿಸಲು ಸಚಿವರು, ಸ್ಥಳೀಯ ಶಾಸಕರು ಬಂದಿಲ್ಲ. ಅಧಿಕಾರಿಗಳು ಸರಿಯಾಗಿ ಸಮೀಕ್ಷೆ ನಡೆಸಿಲ್ಲ' ಎಂದು ರೈತರು ದೂರಿದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ, ಸಿ.ಟಿ.ರವಿ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ರಮೇಶ ಜಾರಕಿಹೊಳಿ, ಶಶಿಕಲಾ ಜೊಲ್ಲೆ, ವಿಠ್ಠಲ ಹಲಗೇಕರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.