ಬೆಂಗಳೂರು: ಇದೇ 6ರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ವಿರೋಧ ಪಕ್ಷಗಳ ನಾಯಕರಾದ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಭೆ ಸೇರಿ ಚರ್ಚೆ ನಡೆಸಿದರು.
ಪ್ರಮುಖ ಇಲಾಖೆಗಳ ವೈಫಲ್ಯಗಳನ್ನು ಸದನದಲ್ಲಿ ಪ್ರಸ್ತಾಪಿಸಬೇಕು. ಪ್ರತಿಯೊಂದು ವಿಷಯದ ಬಗ್ಗೆ ಆಳವಾಗಿ ಅಧ್ಯಯನ ನಡೆಸಿ ವಿಷಯವನ್ನು ಪ್ರಸ್ತಾಪಿಸಬೇಕು ಎಂದು ತೀರ್ಮಾನಿಸಲಾಯಿತು.
ಜನ ಸಾಮಾನ್ಯರು ಎದುರಿಸುತ್ತಿರುವ ತೊಂದರೆಗಳು, ಆರ್ಥಿಕ ಹೊರೆಯಾಗುವ ಸರ್ಕಾರದ ನಿರ್ಧಾರಗಳ ಬಗ್ಗೆ ಆಯ್ದ ನಾಯಕರು ಪ್ರಸ್ತಾಪಿಸಬೇಕು. ಕಳೆದ ಅಧಿವೇಶನದಲ್ಲಿ ನಿರ್ವಹಿಸಿದ ರೀತಿಯಲ್ಲೇ ಪೂರಕ ದಾಖಲೆಗಳನ್ನು ಮುಂದಿಟ್ಟು ವ್ಯವಸ್ಥಿತವಾಗಿ ಸರ್ಕಾರದ ವೈಫಲ್ಯವನ್ನು ಪ್ರಸ್ತಾಪಿಸಬೇಕು ಎಂದು ಸಲಹೆಗಳು ಬಂದವು. ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಎಸ್.ಆರ್.ವಿಶ್ವನಾಥ್ ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.