ADVERTISEMENT

ನಾಳೆ ಬಿಜೆಪಿ ಪ್ರಮುಖರ ಸಮಿತಿ ಸಭೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 13 ಮೇ 2022, 6:00 IST
Last Updated 13 ಮೇ 2022, 6:00 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು:ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆ, ರಾಜ್ಯ ಸಭೆಯ ನಾಲ್ಕು ಸ್ಥಾನಗಳ ಚುನಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸುವುದಾಗಿ ಬಿಜೆಪಿ ರಾಜ್ಯ ಪ್ರಮುಖರ ಸಮಿತಿ (ಕೋರ್‌ ಕಮಿಟಿ) ಸಭೆ ಶನಿವಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ವಿಧಾನ ಪರಿಷತ್‌, ರಾಜ್ಯಸಭೆ ಚುನಾವಣೆ, ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಹಲವು ಚುನಾವಣೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ವಿಧಾನ ಪರಿಷತ್‌ ಹಾಗೂ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿಸ್ತೃತವಾಗಿ ಚರ್ಚಿಸಲಾಗುವುದು ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿಯೇ ಚುನಾವಣೆ ನಡೆಸಬೇಕು ಎಂಬ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.