ADVERTISEMENT

ಸಿ.ಡಿ. ಪ್ರಕರಣ: ಹೇಳಿಕೆ ದಾಖಲಿಸಲು ಯುವತಿಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 12:20 IST
Last Updated 29 ಮಾರ್ಚ್ 2021, 12:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ಸ್ವ–ಇಚ್ಛಾ ಹೇಳಿಕೆ ನೀಡಲು ಯುವತಿಗೆ ನ್ಯಾಯಾಲಯದಿಂದ ಅನುಮತಿ ಸಿಕ್ಕಿರುವುದಾಗಿ ಗೊತ್ತಾಗಿದ್ದು, ಶೀಘ್ರವೇ ಯುವತಿ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆ ಇದೆ.

ಯುವತಿ ಹೇಳಿಕೆ ದಾಖಲು ಮಾಡಿಕೊಳ್ಳುವಂತೆ ಕೋರಿ ಅವರ ಪರ ವಕೀಲರು, ನ್ಯಾಯಾಲಯದ ಉಪ ರಿಜಿಸ್ಟ್ರಾರ್ ಅವರಿಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪರಿಶೀಲನೆ ನಡೆಸಿದ್ದ ಉಪ ರಿಜಿಸ್ಟ್ರಾರ್, ಹೇಳಿಕೆ ದಾಖಲಿಸಿಕೊಳ್ಳಲು ಅನುಮತಿ ನೀಡಿದ್ದಾರೆ. ಅದರ ಆದೇಶ ಪ್ರತಿ ಪಡೆಯಲು ಜಗದೀಶ್ ಪರ ವಕೀಲರು, ನ್ಯಾಯಾಲಯಕ್ಕೆ ಬಂದಿದ್ದಾರೆ. ಪ್ರತಿ ಕೈ ಸೇರಿದ ನಂತರವೇ ಹೇಳಿಕೆ ದಾಖಲು ನಿಖರ ಸಮಯ ತಿಳಿಯಲಿದೆ.

ADVERTISEMENT

24ನೇ ಎಸಿಎಂಎಂ ನ್ಯಾಯಾಲಯ ಅಥವಾ ನ್ಯಾಯಾಧೀಶರ ಮನೆಗೆ ಯುವತಿ ಬಂದು ಹೇಳಿಕೆ ನೀಡಲು ಅವಕಾಶವಿದೆ. ಹೀಗಾಗಿ, ನಗರದ ನ್ಯಾಯಾಲಯದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮಹಿಳಾ ಅಧಿಕಾರಿಗಳು ಸೇರಿದಂತೆ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ಸ್ಥಳದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.