ADVERTISEMENT

ಅನರ್ಹರು, ಬಿಜೆಪಿ ಶಾಸಕರ ಕ್ಷೇತ್ರಗಳಿಗಷ್ಟೇ ಅನುದಾನ

ಎಚ್‌ಕೆಆರ್‌ಡಿಬಿ: ಮುಖ್ಯಮಂತ್ರಿಯ ವಿವೇಚನಾ ನಿಧಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 18:30 IST
Last Updated 6 ಸೆಪ್ಟೆಂಬರ್ 2019, 18:30 IST

ರಾಯಚೂರು: ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್‌ಡಿಬಿ)ಯ 2019–20ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಮೀಸಲಿಟ್ಟ ಮುಖ್ಯಮಂತ್ರಿ ವಿವೇಚನಾ ನಿಧಿಯನ್ನು ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಮಾತ್ರ ಹಂಚಿಕೆ ಮಾಡಿ
ಬಿ.ಎಸ್‌. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಒಟ್ಟು ₹75 ಕೋಟಿ ನಿಧಿಯಲ್ಲಿ ಅನರ್ಹ ಶಾಸಕರ ಮಸ್ಕಿ ಹಾಗೂ ವಿಜಯನಗರ ಕ್ಷೇತ್ರಗಳಿಗೆ ಅತಿಹೆಚ್ಚು, ತಲಾ ₹11 ಕೋಟಿ ಕೊಟ್ಟಿದ್ದಾರೆ.

ರಾಯಚೂರು ನಗರ ಕ್ಷೇತ್ರಕ್ಕೆ ₹4 ಕೋಟಿ ಹಾಗೂ ಈ ಭಾಗದ ಇನ್ನುಳಿದ 16 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹3 ಕೋಟಿ ಅನುದಾನವನ್ನು ನೀಡಿದ್ದಾರೆ.

ADVERTISEMENT

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಅನುದಾನ ನೀಡಿಲ್ಲ.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅನುದಾನ ಹಂಚಿಕೆ ಮಾಡಿ, ಜುಲೈ 18, 2019 ರಂದು ಹೊರಡಿಸಿದ್ದ ಆದೇಶವನ್ನು ಯಡಿಯೂರಪ್ಪ ರದ್ದು ಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.