ADVERTISEMENT

ರೆಸಾರ್ಟ್‌ನಲ್ಲಿ ಬಿಜೆಪಿ ಶಾಸಕರು

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 12:15 IST
Last Updated 12 ಜುಲೈ 2019, 12:15 IST
   

ಬೆಂಗಳೂರು: ರಾಜ್ಯ ರಾಜಕಾರಣ ಮತ್ತೊಂದು ತಿರುವು ಪಡೆಯುತ್ತಿದ್ದು ಬಿಜೆಪಿ ಶಾಸಕರು ರೆಸಾರ್ಟ್‌ ರಾಜಕಾರಣದ ಮೊರೆ ಹೋಗಿದ್ದಾರೆ

ಶುಕ್ರವಾರದ ವಿಧಾನಸಭೆ ಕಲಾಪದಲ್ಲಿಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಮಂಡಿಸಲು ನಿರ್ಧರಿಸಿರುವುದಾಗಿ ಹೇಳಿರುವುದರಿಂದ ಕಮಲ ಪಾಳಯದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಬಿಜೆಪಿ ಶಾಸಕರನ್ನು ಸಂಪರ್ಕಿಸುವ ಅವಕಾಶ ಇರುವುದರಿಂದ ರೆಸಾರ್ಟ್‌ಗೆ ತೆರಳುತ್ತಿರುವುದಾಗಿ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ADVERTISEMENT

ಯಲಹಂಕದ ರಾಜಾನುಕುಂಟೆ ಸಮೀಪದ ರಮಡ ರೆಸಾರ್ಟ್‌ನಲ್ಲಿ ಬಿಜೆಪಿ ಶಾಸಕರು ವಾಸ್ತವ್ಯ ಹೂಡಿದ್ದಾರೆ.

#correction Bengaluru: BJP MLAs leaving for Ramada resort from state assembly. #Karnataka pic.twitter.com/wT285QLw0x

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.