ADVERTISEMENT

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಡಿಕೆಶಿ ಗೃಹ ಕಚೇರಿಯಲ್ಲಿ ಭೇಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ನವೆಂಬರ್ 2023, 15:35 IST
Last Updated 8 ನವೆಂಬರ್ 2023, 15:35 IST
<div class="paragraphs"><p>ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ</p></div>

ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

   

ಬೆಂಗಳೂರು: ಭಾರತೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಈ ಕುರಿತು X ತಾಣದಲ್ಲಿ ಫೋಟೊ ಹಂಚಿಕೊಂಡಿರುವ ಡಿಕೆ ಶಿವಕುಮಾರ್ ಅವರು ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ ಅವರು ಬುಧವಾರ ನನ್ನನ್ನು ನನ್ನ ಗೃಹ ಕಚೇರಿಯಲ್ಲಿ ಭೇಟಿಯಾಗಿ ಹಲವು ವಿಷಯಗಳ‌ ಕುರಿತು ಚರ್ಚಿಸಿದರು ಎಂದು ಹೇಳಿಕೊಂಡಿದ್ದಾರೆ.

ADVERTISEMENT

ಆದರೆ ತೇಜಸ್ವಿ ಸೂರ್ಯ ಅವರು ಈ ಭೇಟಿಯ ಕುರಿತು ಟ್ವೀಟ್ ಮಾಡಿಕೊಂಡಿಲ್ಲ.

ಸಂಸದ ತೇಜಸ್ವಿ ಸೂರ್ಯ ಅವರ ಈ ಭೇಟಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.