ADVERTISEMENT

ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ಸಂಬಂಧ ಅಣ್ಣಾಮಲೈ ಹೇಳಿದ್ದಾರೆ: ತೇಜಸ್ವಿ ಸೂರ್ಯ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 20:44 IST
Last Updated 21 ಜನವರಿ 2023, 20:44 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ಬೆಂಗಳೂರು: ‘ಚೆನ್ನೈ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನನ್ನ ಸಹ ಪ್ರಯಾಣಿಕರಾಗಿದ್ದ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಎಲ್ಲವನ್ನೂ ಹೇಳಿದ್ದಾರೆ. ಈಗ ಮತ್ತೆ ಅದನ್ನೇ ಹೇಳಿ ಸಮಯ ವ್ಯರ್ಥ ಮಾಡಲು ಬಯಸುವುದಿಲ್ಲ’ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದರು.

2022ರ ಡಿಸೆಂಬರ್‌ನಲ್ಲಿ ಚೆನ್ನೈನಿಂದ ತಿರುಚಿನಾಪಳ್ಳಿಗೆ ಹೊರಟಿದ್ದ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದಿದ್ದ ಆರೋಪ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ ಸಿಟ್ಟಾದ ಅವರು, ‘ವಿಮಾನಯಾನ ಸಂಸ್ಥೆಯ ಅಧಿಕಾರಿಗಳು, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ ಅಧಿಕಾರಿಗಳು, ಅಣ್ಣಾಮಲೈ, ಇತರ ಇಬ್ಬರು ಸಹ ಪ್ರಯಾಣಿಕರು ಎಲ್ಲವನ್ನೂ ತಿಳಿಸಿದ್ದಾರೆ. ಅವರ ಹೇಳಿಕೆಯನ್ನು ಬೇಕಿದ್ದರೆ ಮತ್ತೊಮ್ಮೆ ನೋಡಿ’ ಎಂದರು.

‘ಈಗ ಕಾಂಗ್ರೆಸ್‌ನವರೋ, ಇನ್ಯಾರೋ ಕೇಳುತ್ತಾರೆಂದು ಪದೇ ಪದೇ ಹೇಳಿ ಸಮಯ ವ್ಯರ್ಥಮಾಡಲು ಬಯಸುವುದಿಲ್ಲ. ಸ್ಪಷ್ಟೀಕರಣವನ್ನು ಈಗಾಗಲೇ ಕೊಡಲಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.