ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ಸ್ಥಾನ ದೊರೆತಿರುವುದಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿಯಲ್ಲಿ ನನ್ನನ್ನು ಸದಸ್ಯನನ್ನಾಗಿ ನೇಮಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆಗಳು. ನಮ್ಮ ಪಕ್ಷದ ಉನ್ನತ ಮಟ್ಟದ ಸಮಿತಿಯಲ್ಲಿ ಸೇವೆ ಸಲ್ಲಿಸುವ ಈ ಗೌರವಕ್ಕಾಗಿ ನಾನು ಆಭಾರಿಯಾಗಿದ್ದೇನೆ’ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಬಿಎಸ್‌ವೈಗೆ ಅಭಿನಂದನೆ ಸಲ್ಲಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ‘ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಪಕ್ಷದ ಅತ್ಯಂತ ಉನ್ನತವಾದ ಸಂಸದೀಯ ಮಂಡಳಿಗೆ ತಮ್ಮನ್ನು ನೇಮಕ ಮಾಡುವುದರ ಮೂಲಕ ಪಕ್ಷ ತಮಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ’ ಎಂದು ಟ್ವೀಟಿಸಿದ್ದಾರೆ.
11 ಸದಸ್ಯರನ್ನೊಳಗೊಂಡ ಸಂಸದೀಯ ಮಂಡಳಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಕೆ. ಲಕ್ಷ್ಮಣ್ ಅವರೂ ಇದ್ದಾರೆ. ಸರ್ಬಾನಂದ ಸೊನೊವಾಲ್ ಮತ್ತು ಯಡಿಯೂರಪ್ಪ ಅವರನ್ನು ಮಂಡಳಿಗೆ ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.