
ಪ್ರಜಾವಾಣಿ ವಾರ್ತೆ
ನಿತಿನ್ ನಬೀನ್
ನವದೆಹಲಿ: ‘ಕರ್ನಾಟಕದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಚುನಾವಣೆಗಳಿಗೆ ಪಕ್ಷವನ್ನು ಈಗಿನಿಂದಲೇ ಸಜ್ಜುಗೊಳಿಸಬೇಕು. ರಾಜ್ಯ ನಾಯಕರು ತಮ್ಮಲ್ಲಿನ ಅಭಿಪ್ರಾಯ ಬೇಧಗಳನ್ನು ಮರೆತು ಸಂಘಟನೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು‘ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೂಚಿಸಿದರು.
ಬಿಜೆಪಿ ರಾಜ್ಯ ಘಟಕಗಳ ಅಧ್ಯಕ್ಷರ ಜತೆಗೆ ನಬಿನ್, ಮಾಜಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಬಿ.ಎಲ್.ಸಂತೋಷ್ ಬುಧವಾರ ಸಭೆ ನಡೆಸಿ ರಾಜ್ಯವಾರು ಪಕ್ಷ ಸಂಘಟನೆ ಹಾಗೂ ಚುನಾವಣಾ ತಯಾರಿಗಳ ಬಗ್ಗೆ ಮಾಹಿತಿ ಪಡೆದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗಿಯಾಗಿ ಪಕ್ಷದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.