ADVERTISEMENT

ಪರಿಷತ್ತಿನ ಒಂದು ಸ್ಥಾನಕ್ಕೆ ಬಿಜೆಪಿಯಿಂದ ಪಿ.ಎಂ. ಮುನಿರಾಜುಗೌಡ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 12:08 IST
Last Updated 4 ಮಾರ್ಚ್ 2021, 12:08 IST
ಪರಿಷತ್ತಿನ ಒಂದು ಸ್ಥಾನಕ್ಕೆ ಬಿಜೆಪಿಯಿಂದ ಪಿ.ಎಂ. ಮುನಿರಾಜುಗೌಡ ನಾಮಪತ್ರ
ಪರಿಷತ್ತಿನ ಒಂದು ಸ್ಥಾನಕ್ಕೆ ಬಿಜೆಪಿಯಿಂದ ಪಿ.ಎಂ. ಮುನಿರಾಜುಗೌಡ ನಾಮಪತ್ರ   

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ತಿನ ಒಂದು ಸ್ಥಾನಕ್ಕಾಗಿ ಮಾರ್ಚ್ 15ರಂದು ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬೆಂಗಳೂರಿನ ಮುನಿರಾಜುಗೌಡ ಪಿ.ಎಂ ಅವರು ಇಂದು ನಾಮಪತ್ರ ಸಲ್ಲಿಸಿದರು.

ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.