
ಬೆಂಗಳೂರು: ‘ಮುಂಬರುವ ಲೋಕಸಭೆ ಚುನಾವಣೆಗೆ ಪ್ರಚಾರ ಪಡೆಯಲು ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಬಿಜೆಪಿ ಬಳಸುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಚಂದ್ರಶೇಖರ್ ಆರೋಪಿಸಿದ್ದಾರೆ.
‘ರಾಮ ಮಂದಿರ ಕಾರ್ಯಕ್ರಮದ ಹಿಂದೆ ರಾಜಕೀಯ ಉದ್ದೇಶ ಇಲ್ಲವೆಂದಾದರೆ ಪ್ರಧಾನಿ ಮತ್ತು ಬಿಜೆಪಿ ನಾಯಕರು ತರಾತುರಿಯಲ್ಲಿ ರಾಮಮಂದಿರ ಉದ್ಘಾಟನೆ ಯಾಕೆ ಮಾಡಬೇಕಿತ್ತು’ ಎಂದು ಅವರು ಪ್ರಶ್ನಿಸಿದ್ದಾರೆ.
'ರಾಮಮಂದಿರಕ್ಕೆ ನಮ್ಮ ವಿರೋಧ ಇಲ್ಲ. ಆದರೆ, ಕಟ್ಟಡ ಪೂರ್ಣಗೊಳ್ಳುವ 10–12 ತಿಂಗಳು ಮೊದಲೇ ರಾಮನ ಮೂರ್ತಿ ಪ್ರತಿಷ್ಠಾಪನೆಯ ಹಿಂದಿರುವ ಬಿಜೆಪಿಯ ರಾಜಕೀಯಕ್ಕೆ ನಮ್ಮ ವಿರೋಧವಿದೆ. ಇದು ಬಿಜೆಪಿ, ಆರೆಸ್ಸೆಸ್ ಕಾರ್ಯಕ್ರಮ ಆಗಿರುವುದರಿಂದ, ಇದೇ 22ರ ಕಾರ್ಯಕ್ರಮ ಬಹಿಷ್ಕರಿಸಲು ಪಕ್ಷ ನಿರ್ಧರಿಸಿದೆ. ಆದರೆ, ಬಿಜೆಪಿಯವರು ಕಾಂಗ್ರೆಸ್ ಪಕ್ಷವು ರಾಮಮಂದಿರವನ್ನು ಬಹಿಷ್ಕರಿಸಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ’ ಎಂದೂ ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.