ADVERTISEMENT

BJP ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆ ನಡುವೆ ಅಮಿತ್‌ ಶಾ ಭೇಟಿಯಾದ ವಿಜಯೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ನವೆಂಬರ್ 2025, 13:23 IST
Last Updated 23 ನವೆಂಬರ್ 2025, 13:23 IST
   

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು (ಭಾನುವಾರ) ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಬಿ.ವೈ.ವಿಜಯೇಂದ್ರ ಭೇಟಿ ಕುತೂಹಲ ಮೂಡಿಸಿದೆ.

ಭೇಟಿ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬಿ.ವೈ. ವಿಜಯೇಂದ್ರ ಪೋಸ್ಟ್‌ ಹಂಚಿಕೊಂಡು, ರಾಷ್ಟ್ರ ರಾಜಕಾರಣಕ್ಕೆ ಸ್ಪಷ್ಟ ದಿಕ್ಸೂಚಿ ಎಂದು ವಿಶ್ಲೇಷಿಸಲಾಗಿದ್ದ ಬಿಹಾರ ಚುನಾವಣೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, ಎನ್‌ಡಿಎ ಮೈತ್ರಿಕೂಟವು ಐತಿಹಾಸಿಕ ದಿಗ್ವಿಜಯ ಸಾಧಿಸುವಲ್ಲಿ ಮಹತ್ವದ ಪಾತ್ರವಹಿಸಿ ಚುನಾವಣಾ ನೈಪುಣ್ಯತೆ ಮೆರೆದ ಅಮಿತ್ ಶಾ ಅವರು ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣೆಯಾಗಿದ್ದಾರೆ ಎಂದಿದ್ದಾರೆ.

ADVERTISEMENT

ಕರ್ನಾಟಕದ ರಾಜಕಾರಣದ ಪ್ರಸ್ತುತ ವಿದ್ಯಮಾನಗಳ ಮಾಹಿತಿ ನೀಡಲಾಗಿದ್ದು, ಪಕ್ಷ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಮಾರ್ಗದರ್ಶನ ಪಡೆಯಲಾಯಿತು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.