ಬಿ.ವೈ.ವಿಜಯೇಂದ್ರ
ಬೆಂಗಳೂರು: ‘ಇದೇ 17ರಂದು ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಡಲಿದ್ದೇವೆ. ಮಂಜುನಾಥನ ದರ್ಶನ ಪಡೆಯಲು ಭಕ್ತರಾಗಿ ಅಲ್ಲಿಗೆ ಹೋಗುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
‘ಎಸ್‌ಐಟಿ ತನಿಖೆ ಶೀಘ್ರ ಮುಗಿಸಬೇಕು. ಇದನ್ನು ಹೀಗೆ ಎಳೆದುಕೊಂಡು ಹೋಗಲು ಸಾಧ್ಯವಿಲ್ಲ. ಸತ್ಯಾಸತ್ಯತೆ ಬಹಿರಂಗ ಆಗಬೇಕು. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕಿದೆ’ ಎಂದು ಅವರು ಸುದ್ದಿಗಾರರ ಜತೆ ಮಾತನಾಡಿ ತಿಳಿಸಿದರು.
‘ಧರ್ಮಸ್ಥಳದ ಪಿತೂರಿಯ ಹಿಂದೆ ಕೆಲವು ಸಮಾಜಘಾತುಕ ಶಕ್ತಿಗಳು, ಎಸ್‌ಡಿಪಿಐ, ಬೇರೆ ಬೇರೆ ಸಂಘಟನೆಗಳು ಕುತಂತ್ರಗಳು ನಡೆಸುತ್ತಿವೆ ಎಂಬ ಚರ್ಚೆಗಳು ಜನಸಾಮಾನ್ಯರಲ್ಲಿ ನಡೆಯುತ್ತಿವೆ. ನಾವು ಮಂಜುನಾಥೇಶ್ವರ ಹಾಗೂ ಅಣ್ಣಪ್ಪ ಸ್ವಾಮಿಯ ದರ್ಶನ ಪಡೆಯಲು ಹೋಗಲಿದ್ದೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.