ADVERTISEMENT

ಕಲ್ಲುತೂರಾಟ ಪ್ರಕರಣಕ್ಕೆ ಬಿಜೆಪಿ ಕುಮ್ಮಕ್ಕು: ಬಿಡುಗಡೆಯಾಗಲಿದೆ ಇನ್ನೊಂದು ಆಡಿಯೊ!

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2019, 7:51 IST
Last Updated 14 ಫೆಬ್ರುವರಿ 2019, 7:51 IST
   

ಬೆಂಗಳೂರು: ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್‌ ಕಾರ್ಯಕರ್ತರು ನಡೆಸಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ ಬಿಜೆಪಿಯವರ ಕೈವಾಡವಿದೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಇದೇ ವೇಳೆ ನವೀನ್‌ ಗೌಡ ನವಕರ್ನಾಟಕ ಸೇನೆ ಎಂಬುವವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಪ್ರಕಟಿಸಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
‘ಹಾಸನದಲ್ಲಿ ಪ್ರೀತಂ ಗೌಡರ ಸಹಚರರು ನಿನ್ನೆ ಬಿಜೆಪಿ ಸ್ನೇಹಿತನೊಬ್ಬನಿಗೆ ಕರೆಮಾಡಿ ಪ್ರತಿಭಟನೆ ನಡೆಸುತ್ತಿರುವ ಜೆಡಿಎಸ್ ಕಾರ್ಯಕರ್ತರ ನಡುವೆ ನಿಂತು ಕಲ್ಲು ತೂರುವಂತೆ ಒತ್ತಾಯ ಮಾಡಿದರು. ಈ ಕುರಿತು ಆಡಿಯೊ ಲಭ್ಯವಾಗಿದ್ದು, ಇಂದು ಮಧ್ಯಾಹ್ನ 2:30ಕ್ಕೆ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಬಿಡುಗಡೆಗೊಳಿಸಲಿದ್ದೇನೆ’ ಎಂದು ಬರೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆಇತ್ತಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.