ವಿಧಾನಸೌಧದ ಎದುರು ಬಿಜೆಪಿ ಶಾಸಕರು ಸೋಮವಾರ ಪ್ರತಿಭಟನೆ ನಡೆಸಿದರು
ಪ್ರಜಾವಾಣಿ ಚಿತ್ರ
ಬೆಂಗಳೂರು: ರಾಜ್ಯಪಾಲ ಹಾಗೂ ರಾಜಭವನಕ್ಕೆ ಅಪಮಾನ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಂಡಿದ್ದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಎಲ್ಲಾ ವಿಧಾನಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ತಿನ ಸದಸ್ಯರು ಶಾಸಕರ ಭವನದಿಂದ ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಿದರು.
ರಾಜ್ಯಪಾಲರ ಅಧಿಕಾರ ಹೈಕೋರ್ಟ್ ಎತ್ತಿಹಿಡಿದರೂ ಸಹಿಸದ ಕಾಂಗ್ರೆಸ್ಸಿಗೆ ಧಿಕ್ಕಾರ, ರಾಜ್ಯಪಾಲರ ಕುಲಾಧಿಪತಿ ಸ್ಥಾನಕ್ಕೆ ಕತ್ತರಿ ಹಾಕಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ರಾಜ್ಯಪಾಲರ ಸಾಂವಿಧಾನಿಕ ಹುದ್ದೆಗೆ ಕಳಂಕ ತಂದ ಮುಖ್ಯಮಂತ್ರಿಗೆ ಧಿಕ್ಕಾರ, ರಾಷ್ಟ್ರಪತಿ ಮತ್ತು ರಾಜ್ಯಪಾಲರು, ನ್ಯಾಯಾಲಯ, ಇಡಿ, ಸಿಬಿಐ ವಿರೋಧಿ ಕಾಂಗ್ರೆಸ್ಸಿಗೆ ಧಿಕ್ಕಾರ, ರಾಜ್ಯಪಾಲರ ಹೆಸರಲ್ಲಿ ನೀಚ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಧಿಕ್ಕಾರ- ಎಂಬ ಘೋಷಣೆ ಒಳಗೊಂಡ ಭಿತ್ತಿಪತ್ರಗಳೊಂದಿಗೆ ಪ್ರತಿಭಟನಾ ನಡಿಗೆಯಲ್ಲಿ ಸಾಗಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.