ಬೆಂಗಳೂರು: ವಿಧಾನಸಭೆಯ 18 ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ವಿರುದ್ದ ಇಂದು(ಬುಧವಾರ) ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಪ್ರತಿಭಟನೆ ನಡೆಯಿತು.
ನಂತರ ಸ್ಪೀಕರ್ ಯು.ಟಿ.ಖಾದರ್ ಅವರ ಕಛೇರಿಗೆ ತೆರಳಿದ ಪ್ರತಿಭಟನಾಕಾರರು ಅಮಾನತು ಆದೇಶ ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿದ್ದಾರೆ. ಸಂವಿಧಾನಬಾಹಿರವಾಗಿ ಶಾಸಕರನ್ನು ಅಮಾನತು ಮಾಡಿದ್ದಕ್ಕಾಗಿ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದೂ ಆಗ್ರಹಿಸಿದ್ದಾರೆ.
ಶಾಸಕರ ಅಮಾನತು ಆದೇಶ ಹಿಂಪೆಡಯುವ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸಲು ಕಾನೂನು ಬದ್ಧವಾಗಿ ಅವರಿಗಿರುವ ಸಂವಿಧಾನಾತ್ಮಕ ಜವಾಬ್ದಾರಿ ಮತ್ತು ಅಧಿಕಾರವನ್ನು ಕೂಡಲೇ ವಾಪಾಸ್ ಮಾಡಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಅಲ್ಲದೇ, ‘ಮಧುಬಲೆ’ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.