ADVERTISEMENT

ಸಚಿನ್ ಆತ್ಮಹತ್ಯೆ ಪ್ರಕರಣ: ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2024, 15:22 IST
Last Updated 31 ಡಿಸೆಂಬರ್ 2024, 15:22 IST
ಸಚಿವ ಪ್ರಿಯಾಂಕ್ ಖರ್ಗೆ ಅವರ ಮನೆ ಮುಂದೆ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಎನ್‌.ರವಿಕುಮಾರ್ ಅವರನ್ನು ವಶಕ್ಕೆ ‍ಪಡೆದರು. ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಭಾಗವಹಿಸಿದ್ದರು.
ಸಚಿವ ಪ್ರಿಯಾಂಕ್ ಖರ್ಗೆ ಅವರ ಮನೆ ಮುಂದೆ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಎನ್‌.ರವಿಕುಮಾರ್ ಅವರನ್ನು ವಶಕ್ಕೆ ‍ಪಡೆದರು. ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಭಾಗವಹಿಸಿದ್ದರು.   

ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆಯ ಹೊಣೆಹೊತ್ತು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪ್ರಿಯಾಂಕ್ ಅವರ ನಿವಾಸದ ಗೋಡೆಗೆ ಪೋಸ್ಟರ್ ಅಂಟಿಸಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಅಲ್ಲದೇ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮುಂತಾದವರು ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದರು.

‘ಕೊಲೆಗಡುಕ, ನೀತಿಗೆಟ್ಟ ಸರ್ಕಾರಕ್ಕೆ ಧಿಕ್ಕಾರ; ಮುಖ್ಯಮಂತ್ರಿಯವರು ಸಚಿವರ ರಾಜೀನಾಮೆ ಪಡೆಯಬೇಕು’ ಎಂದು ಘೋಷಣೆಗಳನ್ನು ಕೂಗಿ ಪೋಸ್ಟರ್‌ ಅಭಿಯಾನಕ್ಕೆ ಚಾಲನೆ ನೀಡಿದರು.

ADVERTISEMENT

ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಎನ್‌.ರವಿಕುಮಾರ್‌ ಮೊದಲಾದವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.