ಮೈಸೂರು: ಜನರ ಬಾತ್‌ರೂಮ್ ಹಾಗೂ ಬೆಡ್‌ರೂಮ್‌ಗಳಿಗೆ ಪ್ರವೇಶಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಶನಿವಾರ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, 'ಭಾರತದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಮಾಧ್ಯಮದ ಮೇಲೆ ಮೋದಿ ಮತ್ತು ಅಮಿತ್ ಶಾ ದಾಳಿ ನಡೆಸುತ್ತಿದ್ದಾರೆ. ಅಕ್ರಮ ದೂರವಾಣಿ ಕದ್ದಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತೊಡಗಿದೆ' ಎಂದು ಹರಿಹಾಯ್ದರು.
ಪೆಗಾಸಸ್ ಗೂಢಚಾರಿಕೆ ಕುರಿತು ಹೇಳಿಕೆ ನೀಡಿದ ಸುರ್ಜೇವಾಲಾ, 'ಜನರ ಸ್ನಾನಗೃಹ ಮತ್ತು ಮಲಗುವ ಕೋಣೆಯನ್ನು ಪ್ರವೇಶಿಸಲು ಬಿಜೆಪಿ ಯತ್ನಿಸುತ್ತಿದೆ' ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.