
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಇದೇ 17 ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟ ಆಯೋಜಿಸಲಾಗಿದ್ದು, ಆ ಬಳಿಕ ಸರ್ಕಾರದ ವೈಫಲ್ಯಗಳ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ಸರಣಿ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಸಂಸದರಾದ ಜಗದೀಶ ಶೆಟ್ಟರ್ ಹಾಗೂ ಗೋವಿಂದ ಕಾರಜೋಳ ಅವರ ಜತೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತರಿಗೆ ವಿವಿಧ ಭರವಸೆಗಳನ್ನು ನೀಡಿ ಒಂದೂ ಈಡೇರಿಸದೇ ಸರ್ಕಾರ ವಂಚನೆ ಮಾಡಿದೆ. ಇದನ್ನು ಖಂಡಿಸಿ ಬಾಗಲಕೋಟೆಯಲ್ಲಿ ಹೋರಾಟ ನಡೆಸಲಿದ್ದೇವೆ’ ಎಂದು ಹೇಳಿದರು.
‘ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಪಾವತಿ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸುಳ್ಳು ಮಾಹಿತಿ ನೀಡಿದ್ದರು. ಗೃಹಲಕ್ಷ್ಮಿ ಹಣದ ಪಾವತಿ ಮಾಡದೇ ಇರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಿದ್ದೇವೆ’ ಎಂದು ಹೇಳಿದರು.
ರಾಜ್ಯದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿ ಏರಿಕೆಯಾಗಿದೆ. ಯುವಕರು ಇದಕ್ಕೆ ಬಲಿಯಾಗುತ್ತಿದ್ದಾರೆ. ಇದರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ದಲಿತ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ‘ಎಕ್ಸ್’ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಶ್ರದ್ಧಾಂಜಲಿ ಸಂದೇಶ ಹಾಕಿದರೂ ಆತನ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿಲ್ಲಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
‘ವಿಬಿ ಜಿ ರಾಮ್ ಜಿ ವಿರುದ್ಧ ಷಡ್ಯಂತ್ರ’
ಬೆಂಗಳೂರು: ಗ್ರಾಮೀಣ ಜನರ ಸ್ನೇಹಿ ‘ವಿಬಿ ಜಿ ರಾಮ್ ಜಿ’ ಯೋಜನೆ ಕುರಿತು ಅಪಪ್ರಚಾರ ನಡೆಸಲು ಕಾಂಗ್ರೆಸ್ ಷಡ್ಯಂತ್ರ ನಡೆಸಿದೆ ಎಂದು ಬಿ.ವೈ.ವಿಜಯೇಂದ್ರ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಜನತೆ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿ ಚುನಾವಣೆ ಮುಂದೂಡಿ ನರೇಗಾ ವಿಷಯವನ್ನು ಕೈಗೆತ್ತಿಕೊಂಡಿದೆ. ರಾಹುಲ್‌ಗಾಂಧಿ ಸಿದ್ದರಾಮಯ್ಯ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.