ADVERTISEMENT

ಅಂಬೇಡ್ಕರ್‌ಗೆ ಕಾಂಗ್ರೆಸ್ ಮಾಡಿದ್ದ ಅನ್ಯಾಯ ಮರೆತಿರೇ ಸಿದ್ದರಾಮಯ್ಯ?: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಸೆಪ್ಟೆಂಬರ್ 2021, 5:48 IST
Last Updated 1 ಸೆಪ್ಟೆಂಬರ್ 2021, 5:48 IST
ಸಿದ್ದರಾಮಯ್ಯ (ಪ್ರಜಾವಾಣಿ ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಪ್ರಜಾವಾಣಿ ಸಂಗ್ರಹ ಚಿತ್ರ)   

ಬೆಂಗಳೂರು: ಬಿಜೆಪಿಯವರು ಸಂವಿಧಾನ ವಿರೋಧಿಸುತ್ತಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಟೀಕೆಗೆ ಆಡಳಿತಾರೂಢ ಪಕ್ಷ ತೀಕ್ಷ್ಣವಾಗಿ ತಿರುಗೇಟು ನೀಡಿದೆ.

ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಸರ್ಕಾರ ಮಾಡಿದ್ದ ಅನ್ಯಾಯವನ್ನು ಮರೆತುಬಿಟ್ಟಿದ್ದೀರಾ ಎಂದು ಬಿಜೆಪಿ ಪ್ರಶ್ನಿಸಿದೆ.

‘ಸುಳ್ಳುಗಳ ಸರದಾರ ಸಿದ್ದರಾಮಯ್ಯ ಅವರೇ, ಸಂವಿಧಾನ ಬರೆದ ಅಂಬೇಡ್ಕರ್ ಅವರಿಗೆ ಜವಹರಲಾಲ್ ನೆಹರೂ ನೇತೃತ್ವದ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಮರೆತು ಬಿಟ್ಟಿರಾ? ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಲು ಕಾಂಗ್ರೆಸ್ ಮಾಡಿದ ಕುತಂತ್ರಗಳ ಪಟ್ಟಿ ಕೊಡಬೇಕೇ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಂಗಳವಾರ ಸರಣಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ‘ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನು ಜವಾಹರಲಾಲ್ ನೆಹರೂ, ಇಂದಿರಾಗಾಂಧಿ ಸೇರಿ ಎಲ್ಲಾ ಕಾಂಗ್ರೆಸ್ ನಾಯಕರು ಒಪ್ಪಿಕೊಂಡರು. ಸಮಾನತೆ, ಭಾತೃತ್ವ ಮತ್ತು ಜಾತ್ಯತೀತತೆಯ ಶತ್ರುಗಳಾದ ಬಿಜೆಪಿಯವರು ಸಂವಿಧಾನ ವಿರೋಧಿಸುತ್ತಿದ್ದಾರೆ. ಈ ಹುನ್ನಾರಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು’ ಎಂದು ಉಲ್ಲೇಖಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.