ADVERTISEMENT

ಜೆಡಿಎಸ್ ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಸಮೃದ್ಧವಾಗಿವೆ: ಬಿಜೆಪಿ ಟೀಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ನವೆಂಬರ್ 2021, 7:03 IST
Last Updated 13 ನವೆಂಬರ್ 2021, 7:03 IST
ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ, ಅವರ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ ಸೂರಜ್‌ – ಪ್ರಜಾವಾಣಿ ಸಂಗ್ರಹ ಚಿತ್ರ
ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ, ಅವರ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ ಸೂರಜ್‌ – ಪ್ರಜಾವಾಣಿ ಸಂಗ್ರಹ ಚಿತ್ರ   

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್‌ ಶಾಸಕ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ ಸೂರಜ್‌ಗೆ ಟಿಕೆಟ್ ನೀಡುವ ಪ್ರಸ್ತಾವವಿದೆ ಎಂಬ ವರದಿಗಳ ಬಗ್ಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ ಹಾಕುತ್ತಿರುವುದು ಪ್ರಜಾಪ್ರಭುತ್ವದ ವ್ಯಂಗ್ಯ ಎಂದು ಬಿಜೆಪಿ ಟೀಕಿಸಿದೆ.

‘ಭವಾನಿ ರೇವಣ್ಣ ಅವರಿಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಟಿಕೆಟ್ ನೀಡಬೇಕೆಂಬ ಬಗ್ಗೆ ಪ್ರಸ್ತಾಪವಾಗಿದೆ. ಕಾರ್ಯಕರ್ತರ ಭಾವನೆಗೆ ಬೆಲೆ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಒಪ್ಪಿಗೆ ಸೂಚಿಸಿದ್ದಾರೆ. ಕುಟುಂಬ ರಾಜಕಾರಣದ ಇನ್ನೊಂದು ಮುಖ ಅನಾವರಣವೇ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಓಲೈಕೆ ರಾಜಕಾರಣ ಕಾಂಗ್ರೆಸ್ ಸಿದ್ಧಾಂತ. ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಈ ಎರಡು ಪಕ್ಷಗಳು ಕುಟುಂಬವಾದಕ್ಕೆ ಮಣೆ ಹಾಕುತ್ತಿರುವುದು ಪ್ರಜಾಪ್ರಭುತ್ವದ ವ್ಯಂಗ್ಯ’ ಎಂದು #ಮಿಷನ್‌ಕುಟುಂಬರಾಜಕಾರಣ ಹ್ಯಾಷ್‌ಟ್ಯಾಗ್ ಸಹಿತ ಬಿಜೆಪಿ ಟ್ವೀಟ್ ಮಾಡಿದೆ.

‘ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ... ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ... ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿವೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.