ADVERTISEMENT

ವಿಧಾನಸಭೆಗೆ ಸ್ಪರ್ಧಿಸಲು ಪರಿಷತ್ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಬಲ ಕುಸಿತ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2023, 16:08 IST
Last Updated 3 ಏಪ್ರಿಲ್ 2023, 16:08 IST
   

ಬೆಂಗಳೂರು: ವಿಧಾನಸಭೆಯಲ್ಲಿ ಸ್ಪರ್ಧಿಸಲು ಮುಂದಾಗಿರುವ ಕೆಲವರು ವಿಧಾನಪರಿಷತ್ತಿನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದರಿಂದಾಗಿ ಮೇಲ್ಮನೆಯಲ್ಲಿ ಬಿಜೆಪಿ ಬಲ ಕುಸಿಯುತ್ತಿದೆ.

75 ಸದಸ್ಯ ಬಲದ ವಿಧಾನಪರಿಷತ್ತಿನಲ್ಲಿ ಬಿಜೆಪಿ 39 ಸದಸ್ಯರನ್ನು ಹೊಂದಿತ್ತು. ಕಾಂಗ್ರೆಸ್‌ 26 ಸದಸ್ಯರನ್ನೂ, ಜೆಡಿಎಸ್‌ 8 ಸದಸ್ಯರನ್ನು ಹೊಂದಿದೆ. ಸಭಾಪತಿ ಮತ್ತು ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಪುಟ್ಟಣ್ಣ ಹಾಗೂ ಬಾಬುರಾವ್ ಚಿಂಚನಸೂರು ರಾಜೀನಾಮೆ ನೀಡಿದ್ದರಿಂದಾಗಿ ಈ ಬಲ 37ಕ್ಕೆ ಇಳಿದಿದೆ.

ಬಿಜೆಪಿಯ ಮತ್ತೊಬ್ಬ ಸದಸ್ಯ ಆಯನೂರು ಮಂಜುನಾಥ್‌ ಅವರು ರಾಜೀನಾಮೆ ನೀಡುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಆರ್. ಶಂಕರ್ ಕೂಡ ಅದೇ ಹಾದಿಯಲ್ಲಿದ್ದಾರೆ ಎನ್ನಲಾಗಿದೆ. ನಾಮನಿರ್ದೇಶಿತ ಸದಸ್ಯ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ ಬೆಂಬಲಿಸುವುದಾಗಿ ಹೇಳಿದ್ದಾರೆ. ಹೀಗಾದಲ್ಲಿ, ಬಿಜೆಪಿ ಸಂಖ್ಯೆ 33ಕ್ಕೆ ಮುಟ್ಟುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.