
ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಗುರುವಾರ ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿಯ ಪೂರ್ವಸಿದ್ಧತೆ ಪರಿಶೀಲಿಸಿದ ಬಳಿಕ ಸುದ್ದಿಗಾರರಿಗೆ ವಿವರ ನೀಡಿದರು.
ಕಾರ್ಯಕಾರಿಣಿಯಲ್ಲಿ 1,250 ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಭೆಯನ್ನು ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ ಶೆಟ್ಟರ್, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರ ಭಾಗವಹಿಸಲಿದ್ದಾರೆ ಎಂದರು.
‘ಮುಂದೆ ಉಪಚುನಾವಣೆ, ವಿಧಾನಪರಿಷತ್, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿದ್ದು, ಈ ನಿಟ್ಟಿನಲ್ಲಿ ಪಕ್ಷವನ್ನು ಸಜ್ಜುಗೊಳಿಸುವುದರ ಬಗ್ಗೆ ಸಮಗ್ರ ಚರ್ಚೆ ಮಾಡಲಿದ್ದೇವೆ‘ ಎಂದು ವಿಜಯೇಂದ್ರ ಹೇಳಿದರು. ಸಾರ್ವಜನಿಕ ಜೀವನದಲ್ಲಿ 50 ವರ್ಷ ಪೂರ್ಣಗೊಳಿಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುವುದು ಎಂದರು.
ವಿಧಾನಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ,
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.