ADVERTISEMENT

ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟನೆಗೆ ಭೂಪೇಂದ್ರ ಯಾದವ್‌: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 15:50 IST
Last Updated 14 ಫೆಬ್ರುವರಿ 2026, 15:50 IST
ಬಿ. ವೈ. ವಿಜಯೇಂದ್ರ
ಬಿ. ವೈ. ವಿಜಯೇಂದ್ರ   

ಬೆಂಗಳೂರು: ಇದೇ 19ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಭಾಗವಹಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದ ಅರಮನೆ ಮೈದಾನದಲ್ಲಿ ಕಾರ್ಯಕಾರಿಣಿ ನಡೆಯಲಿದೆ. ಅದರ ಉದ್ಘಾಟನಾ ಸಮಾರಂಭದಲ್ಲಿ ಭೂಪೇಂದ್ರ ಯಾದವ್ ಅವರು ಬರಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌.ಸಂತೋಷ್‌ ಉಪಸ್ಥಿತರಿರುವರು’ ಎಂದು ತಿಳಿಸಿದರು.

‘ಪಕ್ಷ ಸಂಘಟನೆ, ರಾಜ್ಯ ಕಾಂಗ್ರೆಸ್‌ ಸರ್ಕಾರದ ಭ್ರಷ್ಟ ಮತ್ತು ಅಭಿವೃದ್ಧಿ ಶೂನ್ಯ ಆಡಳಿತದ ವಿರುದ್ಧ ಹೋರಾಟ ಸಂಘಟಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.