ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2023, 17:04 IST
Last Updated 2 ಡಿಸೆಂಬರ್ 2023, 17:04 IST
<div class="paragraphs"><p>ಬಿ.ವೈ.ವಿಜಯೇಂದ್ರ ಹಾಗೂ ಜೆ.ಪಿ.ನಡ್ಡಾ</p></div>

ಬಿ.ವೈ.ವಿಜಯೇಂದ್ರ ಹಾಗೂ ಜೆ.ಪಿ.ನಡ್ಡಾ

   

ನವದೆಹಲಿ: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿದರು. ಅಲ್ಲದೇ ಶುಭಾಶಯ ಕೋರಿದರು.

ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ನಡ್ಡಾ ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಅದಮ್ಯ ಆತ್ಮವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.

ADVERTISEMENT

ವರಿಷ್ಠರು ಇರಿಸಿರುವ ನಿರೀಕ್ಷೆಯ ಗುರಿ ತಲುಪುವುದೇ ನನ್ನ ಮಹಾ ಸಂಕಲ್ಪವಾಗಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.