ADVERTISEMENT

ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಮಾತನಾಡಿದ ಬಿವೈವಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 16:29 IST
Last Updated 3 ಮಾರ್ಚ್ 2026, 16:29 IST
<div class="paragraphs"><p>ಬಿ.ವೈ.ವಿಜಯೇಂದ್ರ</p></div>

ಬಿ.ವೈ.ವಿಜಯೇಂದ್ರ

   

- ಫೇಸ್‌ಬುಕ್ ಚಿತ್ರ

ಬೆಂಗಳೂರು: ಇಸ್ರೇಲ್– ಇರಾನ್‌ ಯುದ್ಧದ ಕಾರಣ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ ಧೈರ್ಯ ತುಂಬಿದರು.

ADVERTISEMENT

ವಿಡಿಯೋ ಕರೆ ಮೂಲಕ ಮಾತನಾಡಿದ ಅವರು, ‘ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರ್ಕಾರದ ಮಾತನಾಡುತ್ತೇನೆ’ ಎಂದು ಅವರು ಭರವಸೆ ನೀಡಿದರು.

‘ಕೇಂದ್ರ ಸರ್ಕಾರ ಈ ಸಂಬಂಧ ಹೆಚ್ಚಿನ ಗಮನಹರಿಸಿದೆ. ಹಿಂದೆ ಉಕ್ರೇನ್‌ನಲ್ಲಿ ಯುದ್ಧ ಆರಂಭವಾದಾಗ ಅಲ್ಲಿದ್ದ ಎಲ್ಲ ಭಾರತೀಯರನ್ನು ಕರೆತರುವ ಮೂಲಕ ಸಮಸ್ಯೆ ಬಗೆಹರಿಸಿತ್ತು. ಈಗ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯಲ್ಲಿ ಸಂಬಂಧಪಟ್ಟವರ ಜತೆ ನಾನೂ ಮಾತನಾಡುತ್ತೇವೆ. ಎಲ್ಲರೂ ಸುರಕ್ಷಿತವಾಗಿ ವಾಪಸ್‌ ಬರಲು ಅಗತ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.