ADVERTISEMENT

‘ಇಂದಿರಾ’ ಬದಲು ವಾಲ್ಮೀಕಿ ಅನ್ನಕುಟೀರ

ಬೆಂಗಳೂರು ಹೊರತುಪಡಿಸಿ ಗ್ರಾಮೀಣ ಪ್ರದೇಶದಲ್ಲಿ ಹೆಸರು ಬದಲಾವಣೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2019, 19:34 IST
Last Updated 17 ಡಿಸೆಂಬರ್ 2019, 19:34 IST
ಇಂದಿರಾ ಕ್ಯಾಂಟೀನ್
ಇಂದಿರಾ ಕ್ಯಾಂಟೀನ್    

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ‘ಇಂದಿರಾ ಕ್ಯಾಂಟೀನ್’ ಹೆಸರನ್ನು ಬದಲಿಸಿ ‘ಮಹರ್ಷಿ ವಾಲ್ಮೀಕಿ ಅನ್ನಕುಟೀರ’ ಎಂದು ಮರು ನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್‌ ಪಕ್ಷದ ವಿರೋಧದ ನಡುವೆಯೂ ಹೆಸರು ಬದಲಾಯಿಸಲು ಮುಂದಾಗಿದೆ.

ಬೆಂಗಳೂರು ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಹೊರತುಪಡಿಸಿ ರಾಜ್ಯದೆಲ್ಲೆಡೆ‘ಮಹರ್ಷಿ ವಾಲ್ಮೀಕಿ ಅನ್ನಕುಟೀರ’ ಎಂದು ನಾಮಕರಣ ಮಾಡಲಾಗುತ್ತದೆ.

ಮಾಜಿ ಪ್ರಧಾನಿ ಇಂದಿರಾಗಾಂಧಿ ಹೆಸರು ಬದಲಿಸಿದರೆ ತೀವ್ರ ಪ್ರತಿಭಟನೆಎದುರಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದರು.ಕ್ಯಾಂಟೀನ್‌ಗಳಿಗೆ ಅನುದಾನ ನೀಡುತ್ತಿದ್ದು, ರಿಯಾಯಿತಿ ದರದಲ್ಲಿ ಆಹಾರ ಪೂರೈಸಲಾಗುತ್ತಿದೆ.

ADVERTISEMENT

ಕಂದಾಯ ಸಚಿವ ಆರ್.ಅಶೋಕ್ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ‘ಶಾಸಕ ರಾಜೂಗೌಡ ಅವರು ಇಂದಿರಾ ಕ್ಯಾಂಟೀನ್‌ಗಳಿಗೆ ಮಹರ್ಷಿ ವಾಲ್ಮೀಕಿ ಅನ್ನಕುಟೀರ ಎಂದು ಮರುನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿ ಪರಿಶೀಲಿಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಚರ್ಚಿಸಿದ ನಂತರ ಬೆಂಗಳೂರು ಹೊರತುಪಡಿಸಿ ಉಳಿದ ಸ್ಥಳಗಳಲ್ಲಿ ಹೆಸರು ಬದಲಾವಣೆ ಮಾಡಲಾಗುವುದು. ಬೆಂಗಳೂರು ನಗರ ನನ್ನ ವ್ಯಾಪ್ತಿಗೆ ಬರುವುದಿಲ್ಲ’ ಎಂದು ತಿಳಿಸಿದರು.

ಕಾಂಗ್ರೆಸ್ ವಿರೋಧ: ‘ಬಡವರ ಪರವಾದ ಯೋಜನೆಗಳನ್ನು ರೂಪಿಸುವ ಇಚ್ಛಾಶಕ್ತಿ, ಯೋಗ್ಯತೆ ಇಲ್ಲದವರು ಮಾತ್ರ ಹೆಸರು ಬದಲಾವಣೆಯಂತಹ ತುಚ್ಛ, ದ್ವೇಷದ ರಾಜಕಾರಣ ಮಾಡಲು ಸಾಧ್ಯ’ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.

ಹೆಸರು ಬದಲಾವಣೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.