ADVERTISEMENT

ನೆರೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ಭೇಟಿ: ಹಾನಿಯ ಕುರಿತು ಅಧ್ಯಯನ

​ಪ್ರಜಾವಾಣಿ ವಾರ್ತೆ
Published 29 ಜುಲೈ 2024, 11:08 IST
Last Updated 29 ಜುಲೈ 2024, 11:08 IST
<div class="paragraphs"><p>ಬಿಜೆಪಿ </p></div>

ಬಿಜೆಪಿ

   

ಬಿಜೆಪಿ (ಸಾಂದರ್ಭಿಕ ಚಿತ್ರ)

ಬೆಂಗಳೂರು: ಬಿಜೆಪಿ ನಾಯಕರು ಮಂಗಳವಾರದಿಂದ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯ ಕುರಿತು ಅಧ್ಯಯನ ನಡೆಸಲಿದ್ದಾರೆ.

ADVERTISEMENT

ಇದಕ್ಕಾಗಿ ಆರು ತಂಡಗಳನ್ನು ರಚಿಸಲಾಗಿದೆ. ಮಳೆ, ಪ್ರವಾಹ ಮತ್ತು ಭೂಕುಸಿತ ಆಗಿರುವ ಪ್ರದೇಶಗಳಲ್ಲಿ ಸಂತ್ರಸ್ತರಿಂದ ಮಾಹಿತಿ ಪಡೆಯಲಿದ್ದಾರೆ. ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯದ ಬಗ್ಗೆ ಅವಲೋಕನ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ವಿರೋಧಪಕ್ಷದ ನಾಯಕ ಆರ್‌.ಅಶೋಕ ನೇತೃತ್ವದ ತಂಡ ಮಂಗಳೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ, ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ತಂಡವು ಶಿವಮೊಗ್ಗ ಜಿಲ್ಲೆ, ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ನೇತೃತ್ವದ ತಂಡವು ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ, ವಿಧಾನಪರಿಷತ್‌ ವಿರೋಧಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ನೇತೃತ್ವದ ತಂಡವು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ, ಅರವಿಂದ ಬೆಲ್ಲದ ನೇತೃತ್ವದ ತಂಡವು ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ, ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದ ತಂಡವು ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.