
ಬೆಂಗಳೂರು: ‘ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ನಿತಿನ್ ನಬೀನ್ ನಾಯಕತ್ವದಲ್ಲಿ ಸಂಘಟನೆಯ ವಿಜಯ ಪಥವನ್ನು ಮತ್ತಷ್ಟು ವಿಸ್ತರಿಸಲು ಶಕ್ತಿಮೀರಿ ಶ್ರಮಿಸುವ ಭರವಸೆ ನೀಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ನಿತಿನ್ ಅವರು ಅಧ್ಯಕ್ಷರಾಗಿರುವ ಕುರಿತು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ತಮ್ಮ ಸೈದ್ಧಾಂತಿಕ ಬದ್ಧತೆ, ಕ್ರಿಯಾಶೀಲ ನಾಯಕತ್ವ, ಸುದೀರ್ಘ ರಾಜಕೀಯ ಅನುಭವ ಹಾಗೂ ತಲಸ್ಪರ್ಶಿ ಸಂಘಟನಾ ಸಾಮರ್ಥ್ಯವು ಪಕ್ಷವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲಿದೆ. ತಮ್ಮ ದಕ್ಷ ನಾಯಕತ್ವದಲ್ಲಿ ಸಂಘಟನೆಗೆ ಹೊಸ ವೇಗ, ಕಾರ್ಯಕರ್ತರಿಗೆ ಹೊಸ ಉತ್ಸಾಹ ಮೂಡಿದೆ’ ಎಂದು ತಿಳಿಸಿದ್ದಾರೆ.
‘ನಮ್ಮ ಎಲ್ಲ ಹಿರಿಯ ನಾಯಕರ ಬೆಂಬಲದೊಂದಿಗೆ, ದೇಶದ ಏಳಿಗೆಯ ಗುರಿಯೆಡೆಗೆ ಪಕ್ಷವನ್ನು ತಾವು ಸಮರ್ಥವಾಗಿ ಮುನ್ನಡೆಸುವ ವಿಶ್ವಾಸ ನಮ್ಮೆಲ್ಲರಿಗೆ ಇದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.