ADVERTISEMENT

ಹೃದಯಾಘಾತ: ಕಾರ್ಯಕ್ರಮದ ವೇದಿಕೆಯಲ್ಲೇ ಬಿಜೆಪಿ ಕಾರ್ಯಕರ್ತ ಸಾವು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 6:22 IST
Last Updated 10 ಡಿಸೆಂಬರ್ 2020, 6:22 IST
   

ರಾಮನಗರ: ಮಾಗಡಿಯಲ್ಲಿ ಗುರುವಾರ ನಡೆದ ಬಿಜೆಪಿ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲೇ ಕಾರ್ಯಕರ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟರು.

ಶಿವರಾಜು (40) ಮೃತರು.

ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ನೇತೃತ್ವದಲ್ಲಿ ಮಾಗಡಿಯ ಮೈದಾನದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದ ಮುಕ್ತಾಯ ಹಂತದ ವೇಳೆ ವೇದಿಕೆಯ ಮೇಲೆಯೇ ಶಿವರಾಜು ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ವ್ಯಕ್ತಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.