ADVERTISEMENT

20ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಕುಮಾರಸ್ವಾಮಿ ವಿರುದ್ಧ ಅಸಮಾಧಾನ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 19:08 IST
Last Updated 14 ಏಪ್ರಿಲ್ 2019, 19:08 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಮೈಸೂರು: ‘20ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತಿರುಗಿ ಬಿದ್ದಿ‌ದ್ದಾರೆ. ಹೀಗಾಗಿ, ಲೋಕಸಭಾ ಚುನಾವಣೆ ಬಳಿಕ ಮೈತ್ರಿ ಸರ್ಕಾರ ಪತನವಾಗುವುದು ಖಚಿತ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಲ್ಲಿ ಭಾನುವಾರ ತಿಳಿಸಿದರು.

ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿ, ‘ರಾಜ್ಯದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಫಲಿತಾಂಶ ಪ್ರಕಟವಾದ ಕೂಡಲೇ ರಾಜ್ಯ ಸರ್ಕಾರ ಬೀಳುತ್ತದೆ. ಈಗಾಗಲೇ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿಲ್ಲ. ಅವರೆಲ್ಲ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT