ಬೆಂಗಳೂರು: ‘ಬಿಜೆಪಿಯಲ್ಲಿ ಯತ್ನಾಳ ಬಣ ಎಂಬುದೇ ಇಲ್ಲ. ನಾಲ್ಕೈದು ಜನ ಸೇರಿಕೊಂಡು ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ಬಯ್ಯುವುದೇ ಅವರ ಕೆಲಸವಾಗಿದೆ. ಅದನ್ನು ಬಣ ಎನ್ನಲಾಗದು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಯಡಿಯೂರಪ್ಪ ಅವರು ಕೆಲಸ ಮಾಡಿದ್ದಾರೆ. ಈಗ ವಿಜಯೇಂದ್ರ ಮಾಡುತ್ತಿದ್ದಾರೆ. ಆದರೆ ಬಸನಗೌಡ ಪಾಟೀಲ ಯತ್ನಾಳ ಅವರು ತಾವಷ್ಟೇ ಪಕ್ಷಕ್ಕಾಗಿ ದುಡಿದಿದ್ದೇವೆ ಎಂಬಂತೆ ಹೇಳುತ್ತಿದ್ದಾರೆ’ ಎಂದರು.
‘ಯತ್ನಾಳಗೆ ಪಕ್ಷದ ಹಿತಾಸಕ್ತಿ ಬೇಕಾಗಿಲ್ಲ, ಪಕ್ಷಕ್ಕೆ ಅವರು ಬದ್ಧರಾಗಿಯೂ ಇಲ್ಲ. ಪಕ್ಷ ವಿರೋಧಿ ಚಟುವಟಿಕೆಗಳನ್ನು ಅವರು ನಿಲ್ಲಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.