ADVERTISEMENT

ಸಚಿವ ಸಂಪುಟ: ವಿಜಯೇಂದ್ರ ಪರ ಬಿಎಸ್‌ವೈ ಒತ್ತಡ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 0:45 IST
Last Updated 3 ಆಗಸ್ಟ್ 2021, 0:45 IST
ಬಿ.ವೈ. ವಿಜಯೇಂದ್ರ ಮತ್ತು ಬಿ.ಎಸ್‌.ಯಡಿಯೂರಪ್ಪ
ಬಿ.ವೈ. ವಿಜಯೇಂದ್ರ ಮತ್ತು ಬಿ.ಎಸ್‌.ಯಡಿಯೂರಪ್ಪ   

ನವದೆಹಲಿ: ಕಿರಿಯ ಪುತ್ರ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಬಿ.ಎಸ್‌.ಯಡಿಯೂರಪ್ಪ ಒತ್ತಡ ಹೇರಿದ್ದಾರೆ.

ಉಪ ಮುಖ್ಯಮಂತ್ರಿ ಸ್ಥಾನ ಕೊಡದೇ ಇದ್ದರೆ, ಸಚಿವ ಸ್ಥಾನ ನೀಡಿ ಬೃಹತ್ ಕೈಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಖಾತೆಗಳನ್ನು ಕೊಡಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ ಎಂದು ಗೊತ್ತಾಗಿದೆ.

ಮಧು ಬಂಗಾರಪ್ಪ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿರುವುದರಿಂದ ಸೊರಬದ ಶಾಸಕ ಕುಮಾರ್‌ ಬಂಗಾರಪ್ಪಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬುದೂ ಯಡಿಯೂರಪ್ಪ ಒತ್ತಾಸೆ. ಈ ಬೇಡಿಕೆಗೆ ಸಮ್ಮತಿ ನೀಡುವುದು ಅಥವಾ ನೀಡದೇ ಇರುವುದು ವರಿಷ್ಠರಿಗೆ ಬಿಟ್ಟ ವಿಚಾರ. ನಾಯಕರ ಜತೆಗಿನ ಚರ್ಚೆಯ ವೇಳೆ ಬೊಮ್ಮಾಯಿ, ಈ ವಿಷಯ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.