ADVERTISEMENT

ಎಂಇಎಸ್‌ನಿಂದ ಕರಾಳ ದಿನಾಚರಣೆ ತಪ್ಪು: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 21:18 IST
Last Updated 14 ಅಕ್ಟೋಬರ್ 2019, 21:18 IST

ಬೆಳಗಾವಿ: ‘ಕರ್ನಾಟಕ ರಾಜ್ಯೋತ್ಸವದಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯವರು ಕರಾಳ ದಿನಾಚರಣೆ ಮಾಡುವುದು ದೊಡ್ಡ ತಪ್ಪು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲೇ ಇದ್ದುಕೊಂಡು ದ್ರೋಹದ ಕೆಲಸ ಮಾಡುವುದು ಸರಿಯಲ್ಲ. ಕರಾಳ ದಿನಾಚರಣೆ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ವರದಿ ಬಂದ ಬಳಿಕ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ‘ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಹಳಷ್ಟು ಜಲವಿವಾದ ಬಗೆಹರಿದಿವೆ. ನೀರಾವರಿ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ನಿರ್ಧಾರ ಕೈಗೊಳ್ಳುತ್ತಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅ.15 ಹಾಗೂ 16ರಂದು ಮಹಾರಾಷ್ಟ್ರ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುತ್ತಾರೆ’ ಎಂದು ತಿಳಿಸಿದರು.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.