ADVERTISEMENT

ಚಿಲುಮೆ ಸಂಸ್ಥೆ ಕಪ್ಪುಪಟ್ಟಿಗೆ: ಬಿಬಿಎಂಪಿ ಆದೇಶ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2022, 19:45 IST
Last Updated 27 ಡಿಸೆಂಬರ್ 2022, 19:45 IST
   

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯನ್ನು ವಿಎಚ್‌ಎ(ವೋಟರ್ ಹೆಲ್ಪ್‌ಲೈನ್ ಆ್ಯಪ್‌) ಮೂಲಕ ಮಾಡಲು ಮತ್ತು ಮತದಾರರಲ್ಲಿ ಅರಿವು ಮೂಡಿಸಲು ಅನುಮತಿ ನೀಡಲಾಗಿತ್ತು.

ಅನುಮತಿ ಪತ್ರಕ್ಕೆ ವ್ಯತಿರಿಕ್ತವಾಗಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ನೈಜ ಬಿಎಲ್ಒಗಳೆಂದು ಬಿಂಬಿಸಿ ಸಾರ್ವಜನಿಕರಿಗೆ ಮೋಸ ಮಾಡಿರುವುದು ದಾಖಲೆ ಮತ್ತು ವರದಿಗಳಿಂದ ದೃಢಪಟ್ಟಿದೆ. ಈ ಸಂಸ್ಥೆಯಾಗಲಿ, ಸಂಸ್ಥೆಯ ನಿರ್ದೇಶಕರು ಅಥವಾ ಅವರ ಸಹಭಾಗಿತ್ವದಲ್ಲಿ ನಡೆಸಲಾಗುವ ಯಾವುದೇ ಸಂಸ್ಥೆಯು ಪಾಲಿಕೆಯ ಸೇವೆ ಮತ್ತು ಸಂಗ್ರಹಣೆಯ ಟೆಂಡರ್‌ಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.