ಅಮಾನತು
ಬೆಂಗಳೂರು: ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ತುರ್ತು ಸೇವೆಗಳ ವೈದ್ಯಾಧಿಕಾರಿಯನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.
ಡಾ.ಕೆ.ಎನ್. ಶಂಕರ್ ಅಮಾನತುಗೊಂಡವರು. ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡಿದ ಆರೋಪ ಹಾಗೂ ಭ್ರಷ್ಟಾಚಾರದ ದೂರುಗಳ ಕುರಿತು ಬಿಎಂಸಿಆರ್‌ಐ ತನಿಖೆ ನಡೆಸಿ, ವೈದ್ಯಕೀಯ ಶಿಕ್ಷಣ ಇಲಾಖೆಗೆ ವರದಿ ನೀಡಿತ್ತು. ಈಚೆಗೆ ನಡೆದ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲೂ ಅಮಾನತಿಗೆ ಶಿಫಾರಸು ಮಾಡಿ ನಿರ್ಣಯ ಕೈಗೊಳ್ಳಲಾಗಿತ್ತು.
ಡಾ.ಶಂಕರ್ ಅವರು ಕ್ರಿಮಿನಲ್ ಆರೋಪ ಎದುರಿಸುತ್ತಿರುವವರಿಗೆ ನಕಲಿ ವೈದ್ಯಕೀಯ ಪ್ರಮಾಣಪತ್ರಗಳನ್ನು ವಿತರಿಸಿದ್ದಾರೆ. ಅವರ ವಿರುದ್ಧದ ದೂರುಗಳು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿವೆ. ಹಾಗಾಗಿ, ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಇಲಾಖೆಯ ಆದೇಶದಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.