ADVERTISEMENT

ಜಯದೇವ ಜಂಕ್ಷನ್ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 20:16 IST
Last Updated 18 ಅಕ್ಟೋಬರ್ 2019, 20:16 IST
ಜಯದೇವ ಜಂಕ್ಷನ್‌ನಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಅಜಯ್‌ ಸೇಠ್, ಬಿ.ಎಚ್. ಅನಿಲ್‌ಕುಮಾರ್ ಮತ್ತು ತುಷಾರ್ ಗಿರಿನಾಥ್
ಜಯದೇವ ಜಂಕ್ಷನ್‌ನಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಅಜಯ್‌ ಸೇಠ್, ಬಿ.ಎಚ್. ಅನಿಲ್‌ಕುಮಾರ್ ಮತ್ತು ತುಷಾರ್ ಗಿರಿನಾಥ್   

ಬೆಂಗಳೂರು: ಬನ್ನೇರುಘಟ್ಟ ರಸ್ತೆ ಜಯದೇವ ಜಂಕ್ಷನ್‌ನಲ್ಲಿ ಮೆಟ್ರೊ ಇಂಟರ್‌ಚೇಂಜ್ ನಿಲ್ದಾಣ ನಿರ್ಮಾಣಕ್ಕೆ ಶೀಘ್ರವೇ ಪೂರ್ಣ ಪ್ರಮಾಣದ ಕಾಮಗಾರಿ ಆರಂಭವಾಗಲಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮದ(ಬಿಎಂಆರ್‌ಸಿಎಲ್‌) ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್, ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಅವರು ಕಾಮಗಾರಿ ಸಂಬಂಧ ಶುಕ್ರವಾರ ಜಂಟಿ ಪರಿಶೀಲನೆ ನಡೆಸಿದರು.

ಗೊಟ್ಟಿಗೆರೆ– ನಾಗವಾರ ಮಾರ್ಗ ಹಾಗೂ ಆರ್‌.ವಿ.ರಸ್ತೆ– ಸಿಲ್ಕ್‌ಬೋರ್ಡ್‌ ಮೆಟ್ರೊ ಮಾರ್ಗಗಳು ಇಲ್ಲಿ ಪರಸ್ಪರ ಸಂಧಿಸಲಿವೆ. ಈ ಎರಡು ಎತ್ತರಿಸಿದ ಮಾರ್ಗಗಳು ಹಾಗೂ ಮೂರು ಗ್ರೇಡ್‌ ಸೆಪರೇಟರ್‌ಗಳನ್ನು ಒಳಗೊಂಡ ಐದು ಹಂತಗಳ ಸಂಚಾರ ವ್ಯವಸ್ಥೆ ಇಲ್ಲಿ ನಿರ್ಮಾಣವಾಗಲಿದೆ.

ADVERTISEMENT

‘ಬಿಬಿಎಂ‌ಪಿ ಮತ್ತು ಬಿಎಂಆರ್‌ಸಿಎಲ್‌ ತಲಾ ಶೇ 50ರಷ್ಟು ಕಾಮಗಾರಿಗಳನ್ನು ನಿರ್ವಹಿಸಲಿವೆ. ಹೀಗಾಗಿ ಜಂಟಿಯಾಗಿ ಪರಿಶೀಲನೆ ನಡೆಸಲಾಯಿತು’ ಎಂದು ಬಿ.ಎಚ್. ಅನಿಲ್‌ಕುಮಾರ್ ‘‍ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.