ADVERTISEMENT

ಬಿಎಂಟಿಸಿ ಪರೀಕ್ಷೆ: ಶೇ 82ರಷ್ಟು ಹಾಜರು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 16:02 IST
Last Updated 1 ಸೆಪ್ಟೆಂಬರ್ 2024, 16:02 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ (ಬಿಎಂಟಿಸಿ) 2,500 ನಿರ್ವಾಹಕ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಪರೀಕ್ಷೆಗೆ ಶೇ‌ 82ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು.

ಬೆಂಗಳೂರು, ಬಳ್ಳಾರಿ, ಧಾರವಾಡ, ಕಲ್ಬುರ್ಗಿ, ದಾವಣಗೆರೆ, ಮಂಡ್ಯ ಜಿಲ್ಲೆಗಳ ಒಟ್ಟು 50 ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ADVERTISEMENT

ಒಟ್ಟು 23,023 ಮಂದಿ ಅರ್ಜಿ ಸಲ್ಲಿಸಿದ್ದರು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಿತು ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.