ADVERTISEMENT

ಇನ್‌ಸ್ಪೆಕ್ಟರ್‌ ವಿಕ್ಟರ್‌ಗೆ ನ್ಯಾಯಾಂಗ ಬಂಧನ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 18:45 IST
Last Updated 15 ಮಾರ್ಚ್ 2021, 18:45 IST
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)   

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿರುವ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ಇನ್‌ಸ್ಪೆಕ್ಟರ್‌ ವಿಕ್ಟರ್‌ ಸೈಮನ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಾರ್ಚ್‌ 9ರಂದು ವಿಕ್ಟರ್‌ ಅವರ ಮನೆ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಅವರನ್ನು ಬಂಧಿಸಲಾಗಿತ್ತು. ಸೋಮವಾರವರೆಗೂ ವಿಚಾರಣೆಗಾಗಿ ಆರೋಪಿ ಅಧಿಕಾರಿಯನ್ನು ಎಸಿಬಿ ತನಿಖಾ ತಂಡದ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಸೋಮವಾರ ಮಧ್ಯಾಹ್ನ ವಿಕ್ಟರ್‌ ಅವರನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯದ ಎದುರು ಎಸಿಬಿ ಅಧಿಕಾರಿಗಳು ಹಾಜರುಪಡಿಸಿದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.