ADVERTISEMENT

ಇಬ್ಬರಿಗೆ ಫಾದರ್ ಚಸರಾ ದತ್ತಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 21:16 IST
Last Updated 4 ಮಾರ್ಚ್ 2021, 21:16 IST
ಜಾಣಗೆರೆ ವೆಂಕಟರಾಮಯ್ಯ
ಜಾಣಗೆರೆ ವೆಂಕಟರಾಮಯ್ಯ   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ ‘ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಹಾಗೂ ಸಂತ ಜೋಸೆಫರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎ.ಆರೋಗ್ಯಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ತಲಾ ₹10 ಸಾವಿರ ನಗದು, ಸ್ಮರಣಿಕೆ ಹಾಗೂ ಫಲತಾಂಬೂಲ ಒಳಗೊಂಡಿವೆ.

‘ಪರಿಷತ್ತಿನ ಗೌರವ ಕಾರ್ಯಾದರ್ಶಿಗಳಾದ ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್ ಹಾಗೂ ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಅವರಿದ್ದ ಆಯ್ಕೆ ಸಮಿತಿಯು ಪ್ರಶಸ್ತಿಗೆ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.