ADVERTISEMENT

ಭಿನ್ನಮತ ಶಮನಕ್ಕೆ ಮುಂದಾದ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 15:42 IST
Last Updated 2 ಜುಲೈ 2025, 15:42 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಬೆಂಗಳೂರು: ಬಿಜೆಪಿಯಲ್ಲಿನ ಆಂತರಿಕ ಸಮಸ್ಯೆ ನಿವಾರಿಸುವ ಉದ್ದೇಶದಿಂದ ಕಾರ್ಯಾಚರಣೆಗೆ ಇಳಿದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ದಾವಣಗೆರೆ ಜಿಲ್ಲೆಯಲ್ಲಿ ಪಕ್ಷದೊಳಗಿನ ಸಮಸ್ಯೆ ಬಗೆಹರಿಸಲು ಮತ್ತೊಂದು ಸುತ್ತಿನ ಸಭೆ ನಡೆಸಲು ಮುಂದಾಗಿದ್ದಾರೆ.

ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಎಂ.ಪಿ.ರೇಣುಕಾಚಾರ್ಯ ಅವರ ತಂಡವೇ ಕಾರಣ ಎಂದು ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರು ಆರೋಪ ಮಾಡಿದ್ದರು. 

ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರಲ್ಹಾದ ಜೋಶಿ ಈಗಾಗಲೇ ಸಿದ್ದೇಶ್ವರ ಅವರ ಜತೆ ಮಾತುಕತೆ ನಡೆಸಿದ್ದಾರೆ. ಇದೀಗ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿನ ಎರಡು ಬಣಗಳ ಜತೆ ಸಂಧಾನ ನಡೆಸುವ ಉದ್ದೇಶದಿಂದ ಜೋಶಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ.

ADVERTISEMENT

ದಾವಣಗೆರೆ ಜಿಲ್ಲೆಯ ನಾಯಕರ ಮಧ್ಯೆ ಸಮನ್ವಯ ಮೂಡಿಸುವ ಉದ್ದೇಶದಿಂದ ರೇಣುಕಾಚಾರ್ಯ ಮತ್ತು ಅವರ ತಂಡವನ್ನು ಸಭೆಗೆ ಆಹ್ವಾನಿಸಲಾಗಿದೆ. ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಪ್ರಲ್ಹಾದ ಜೋಶಿ ಅವರಿಗೆ ಆರ್‌ಎಸ್ಎಸ್‌ ಜವಾಬ್ದಾರಿ ನೀಡಿತ್ತು. ಆ ಹಿನ್ನೆಲೆಯಲ್ಲಿ ಜೋಶಿ ಸರಣಿ ಸಭೆಗಳನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.